ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯ ಬಸವೇಶ್ವರ ಶಾಲೆಯ ವಿದ್ಯಾರ್ಥಿಗಳನ್ನು ಠಾಣೆಗೆ ಬರಮಾಡಿಕೊಂಡು, ವಿದ್ಯಾರ್ಥಿಗಳೊಂದಿಗೆ ಸಂವಹನ ನಡೆಸಿ, ಠಾಣೆಯಲ್ಲಿ ನಡೆಯುವ ಕಾರ್ಯವೈಖರಿಗಳ ಬಗ್ಗೆ ಮಾಹಿತಿ ನೀಡಲಾಯಿತು. ಮಕ್ಕಳಿಗೆ, ಮಕ್ಕಳ ಕಾನೂನು ಬಗ್ಗೆ, ಅಪರಾಧಗಳನ್ನು ತಡೆಗಟ್ಟುವ ಬಗ್ಗೆ, 112 ಸಹಾಯವಾಣಿಯ ಬಗ್ಗೆ ಅರಿವು ಮೂಡಿಸಲಾಯಿತು.