Dakshina Kannada District Police
@spdkpolice
ID: 3724020738
https://dkpolice.karnataka.gov.in/ 29-09-2015 08:59:53
1,1K Tweet
8,8K Followers
74 Following
Cyber Awareness. ಕರ್ನಾಟಕ ರಾಜ್ಯ ಪೊಲೀಸ್ Karnataka State Police #beawarofscam #CyberSafety #dail1930
ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಸ್ತೆ ಸಂಚಾರಿ ನಿಯಮಗಳು ಮತ್ತು ಸುರಕ್ಷತೆ ಹಾಗೂ ಸಾರ್ವಜನಿಕರು ಪಾಲಿಸಬೇಕಾದ ಸಂಚಾರಿ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು. ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಬಿ.ಸಿ ರೋಡಿನ ನಾರಾಯಣ ಗುರು ಸರ್ಕಲ್ ಬಳಿ ಸಂಭವಿಸಿದ ಅಪಘಾತ ಸ್ಥಳಕ್ಕೆ ದಿನಾಂಕ 15.11.2025 ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರಾದ ಡಾ.ಅರುಣ್ ಕೆ ಐಪಿಎಸ್ ರವರು ಭೇಟಿ ನೀಡಿದರು ಹಾಗೂ ಅಧಿಕಾರಿಗಳಿಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಕಡಬ ಪೊಲೀಸ್ ಠಾಣಾ ಅಕ್ರ 40/2025, ಕಲಂ: 55, 353(2) r/w 103 BNS ಪ್ರಕರಣದಲ್ಲಿ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಪ್ರಸಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿ ಸದ್ರಿ ಪ್ರಕರಣದ ಆರೋಪಿ ಮಹಮ್ಮದ್ ಮುನಾವರ್, ಎಂಬಾತನನ್ನು ದಸ್ತಗಿರಿ ಮಾಡಿದ್ದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಕುತ್ಲೂರು ಎಂಬಲ್ಲಿ ಮನೆಕಳವುಗೈದ ಪ್ರಕರಣದ ಬಗ್ಗೆ ವೇಣೂರು ಪೊಲೀಸ್ ಠಾಣಾ ಅಕ್ರ 85/2025,ಕಲಂ331 (1), 331(4), 305 ಬಿಎನ್ಎಸ್ ಪ್ರಕರಣ ದಾಖಲಾಗಿ, ಈ ಪ್ರಕರಣದ ಆರೋಪಿ ಅಬೂಬಕ್ಕರ್ @ ಇತ್ತೆ ಬರ್ಪೆ ಅಬೂಬಕ್ಕರ್ ಎಂಬಾತನನ್ನು ವೇಣೂರು ಪೊಲೀಸರು ಪತ್ತೆಹಚ್ಚಿ ದಸ್ತಗಿರಿ ಮಾಡಿದ್ದು, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಸುಬ್ರಹ್ಮಣ್ಯ ಪೊಲೀಸ್ ಠಾಣೆ ಅ.ಕ್ರ 49/2025 ಮತ್ತು ಸುಳ್ಯ ಪೊಲೀಸ್ ಠಾಣೆ ಅ.ಕ್ರ 112/2025 ಪ್ರಕರಣಗಳಲ್ಲಿ ಸಾಮಾಜಿಕ ಜಾಲತಾಣವಾದ Facebookನಲ್ಲಿ ಕೋಮು ಪ್ರಚೋದನಕಾರಿ ಸಂದೇಶ ಹಾಕಿದ ಬಗ್ಗೆ ಪ್ರಕರಣ ದಾಖಲಾಗಿದ್ದು, ಆರೋಪಿ ಪುರುಷೋತ್ತಮ ಆಚಾರ್ಯ ಎಂಬಾತನನ್ನು ದಸ್ತಗಿರಿ ಮಾಡಿ, ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ Karnataka State Police
ವೇಣೂರು ಪೊಲೀಸ್ ಠಾಣೆಯಲ್ಲಿ ಮೊಬೈಲ್ ಕಳೆದುಹೋದ ಬಗ್ಗೆ ದಾಖಲಾದ ದೂರಿಗೆ ಸಂಬಂಧಿಸಿದಂತೆ ಕಳೆದುಹೋದ Mobile ನ್ನು CEIR PORTAL ಮುಖಾಂತರ ಪತ್ತೆ ಮಾಡಿ ವಾರಸುದಾರರಿಗೆ ಹಸ್ತಾಂತರಿಸಲಾಗಿದೆ. ಕರ್ನಾಟಕ ರಾಜ್ಯ ಪೊಲೀಸ್ Karnataka State Police
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಸಜಿಪನಡು ಗ್ರಾಮದ ಆದರ್ಶ ಶಾಲೆಯ ಮಕ್ಕಳಿಗೆ ತೆರೆದ ಮನೆ ಕಾರ್ಯಕ್ರಮದಲ್ಲಿ ಠಾಣೆಯ ದೈನಂದಿನ ಚಟುವಟಿಕೆಗಳ ಮಾಹಿತಿ ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲಾಯಿತು.ಕರ್ನಾಟಕ ರಾಜ್ಯ ಪೊಲೀಸ್ Karnataka State Police
ವೇಣೂರು ಪೊಲೀಸ್ ಠಾಣಾ ವತಿಯಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಪೋಕ್ಸೋ ಕಾಯ್ದೆ, ಮಕ್ಕಳ ಕಳ್ಳ ಸಾಗಾಣಿಕೆ ಮತ್ತು ಬಿಕ್ಷಾಟಣೆ, ಮಾದಕ ವ್ಯಸನ ಮತ್ತು ಅದರ ದುಷ್ಪರಿಣಾಮಗಳು,ಸಾಮಾಜಿಕ ಜಾಲತಾಣಗಳ ದುರ್ಬಳಕೆ ಹಾಗೂ ಸಂಚಾರ ನಿಯಮಗಳು ಮತ್ತು ಉಲ್ಲಂಘನೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ಕರ್ನಾಟಕ ರಾಜ್ಯ ಪೊಲೀಸ್ Karnataka State Police
Don’t fall for fake digital arrest scams! Police never ask for money online. Report cybercrime 1930 ಕರ್ನಾಟಕ ರಾಜ್ಯ ಪೊಲೀಸ್ Karnataka State Police #CyberSafety #FraudAlert #StayCyberSafe